ಬೆಳ್ತಂಗಡಿ ತಾಲ್ಲೂಕಿನ ನಗರ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ರೀಮತಿ ವಂದನಾ ಭಂಡಾರಿ ನೆಲ್ಲಿಂಗೇರಿ ಅಂಡಿಂಜೆ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಇವರ ಸಾಮಾಜಿಕ ಕಳಕಳಿಯನ್ನು ಗುರುತಿಸಿದ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕ ಕೆ. ವಸಂತ ಬಂಗೇರ ಮತ್ತು ಮಾಜಿ ಸಚಿವ ಕೆ ಗಂಗಾಧರ ಗೌಡ ಇವರ ಶಿಫಾರಸಿನ ಮೇರೆಗೆ ನೇಮಕ ಮಾಡಲಾಗಿದೆ.
ಸಾಮಾಜಿಕ ಸೇವೆಯಲ್ಲಿ ಆಸಕ್ತಿ ಇರುವ ಇವರು ಪ್ರಸ್ತುತ ಅಂಡಿಂಜೆ ಗ್ರಾಮ ಪಂಚಾಯತ್ ನ ಸದಸ್ಯೆಯಾಗಿರುತ್ತಾರೆ . ಡಿ.ಎಡ್. ಶಿಕ್ಷಣವನ್ನು ಪೂರೈಸಿ ಬೆಂಗಳೂರಿನ ನಾಗವಾರ ಆಂಗ್ಲ ಮಾಧ್ಯಮ ಹೈಸ್ಕೂಲ್ ನಲ್ಲಿ ಸುಮಾರು ಹತ್ತು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಯೋಗ ಶಿಕ್ಷಣವನ್ನು ಪಡೆದಿರುತ್ತಾರೆ.
ಅಂಡಿಂಜೆ ಗ್ರಾಮದ ನೆಲ್ಲಿಂಗೇರಿ ದಿವಂಗತ ಅಪ್ಪು ಭಂಡಾರಿ ಮತ್ತು ಶ್ರೀಮತಿ ಪುಷ್ಪಾ ಭಂಡಾರಿ ದಂಪತಿಯ ಪುತ್ರಿಯಾಗಿರುತ್ತಾರೆ. ವಂದನಾ ಭಂಡಾರಿಯವರು ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಿ ಉನ್ನತ ಸ್ಥಾನ ಮಾನ ಪಡೆಯಲು ಭಗವಂತನ ಅನುಗ್ರಹ ಸದಾ ಇರಲಿ ಎಂಬುದಾಗಿ ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆಯ ಶುಭ ಹಾರೈಕೆ
No comments:
Post a Comment